ಮಂಗಳೂರು: ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಬಂಧಿಸಲಾಗಿರುವ 8 ಮಂದಿಯ ಪೈಕಿ ಇಬ್ಬರು ಹಿಂದುಗಳು ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಹೇಳಿದ್ದಾರೆ.
ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ.

ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾನೆ ಅನ್ನುವ ಮಾಹಿತಿಯನ್ನು ಪೊಲೀಸ್ ಆಯುಕ್ತರು ನೀಡಿದ್ದಾರೆ.

ಈ ಮೂಲಕ ಇದರೊಂದಿಗೆ, ಅಣ್ಣನ ಹತ್ಯೆ ಪ್ರತೀಕಾರಕ್ಕೆ ಆದಿಲ್ ಹಿಂದೂಗಳನ್ನೂ ಬಳಸಿಕೊಂಡಿರುವುದು ಬಯಲಾಗಿದ್ದು,ತನಿಖೆ ಎಲ್ಲಿಯವರೆಗೆ ಸಾಗತ್ತೋ ಅನ್ನುವುದನ್ನು ಕಾದು ನೋಡಬೇಕಿದೆ.
