Breaking
22 Sep 2026, Tue

ಎಡಕ್ಕಾನ ರಾಜಾರಾಮ್ ಭಟ್ ಹೃದಯಾಘಾತದಿಂದ ನಿಧನ

ಪುತ್ತೂರು: ಎಡಕ್ಕಾನ ಟ್ರೇಡರ್ಸ್ ವ್ಯಾಪಾರ ಮಳಿಗೆಯ ಮುಖಸ್ಥ ಎಡಕ್ಕಾನ ರಾಜಾರಾಮ್ ಅವರು ಇಂದು (ಮೇ.06) ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ.

ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ಇವರು ದುಬೈ, ಮಸ್ಕತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿಯೇ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಒಮ್ಮೆ ಹೃದಯಾಘಾತಕ್ಕೊಳಗಾಗಿದ್ದರು.

Leave a Reply

Your email address will not be published. Required fields are marked *