Breaking
6 Aug 2026, Thu

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಉಗ್ರ ಹಫೀಜ್ ಸಯೀದ್,ಮಸೂದ್ ಅಜರ್ ಫಿನೀಶ್..?

ನವದೆಹಲಿ: ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನುವ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ 1.28 ರಿಂದ 1.51ರವರೆಗೆ ಅಂದ್ರೆ 23 ನಿಮಿಷಗಳ ಕಾಲ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಉಗ್ರರ ಪ್ರಧಾನ ಕಚೇರಿ ಮತ್ತು ಮದರಸಾ ನಾಶವಾಗಿವೆ ಎಂದು ತಿಳಿದು ಬಂದಿದೆ. ಇದನ್ನು ಪಾಕಿಸ್ತಾನದ ಮಾಧ್ಯಮಗಳು ಸ್ವತಃ ದೃಢಪಡಿಸಿವೆ. ಈ ದಾಳಿಯಲ್ಲಿ 50 ಜೈಶ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಅನ್ನುವ ಮಾಹಿತಿ ಇದೆ. ಇನ್ನು ಈ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಕೂಡ ಸತ್ತಿದ್ದಾರೆ ಅಂತ ಹೇಳಲಾಗುತ್ತಿದೆ.

ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿತ್ತು. ಉಗ್ರರು ಅಳಿಸಿದ್ದ ಹಿಂದೂ ಮಹಿಳೆಯರ ಕುಂಕುಮಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ದು ,ದೇಶ ಪ್ರೇಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *