Breaking
22 Sep 2026, Tue

ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಉಚಿತ ಚಿಕಿತ್ಸಾ ಸೌಲಭ್ಯ: ದೇಶಾದ್ಯಂತ ಜಾರಿ

ದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ 1.5 ಲಕ್ಷ ರೂ ವೆಚ್ಚದವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆಯನ್ನು ಸುಪ್ರೀಮ್‌ ಕೋರ್ಟ್‌ ನಿರ್ದೇಶನದಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೆ ತಂದಿದೆ.

ಯಾವುದೇ ರಸ್ತೆಯಲ್ಲಿ ಮೋಟಾರು ವಾಹನದಿಂದ ಅಪಘಾತ ಸಂಭವಿಸಿದ್ದಲ್ಲಿ ಯಾವುದೇ ವರ್ಗದ ವ್ಯಕ್ತಿಯಾಗಿರಲಿ ಈ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಅಪಘಾತದ ದಿನಾಂಕದಿಂದ ಗರಿಷ್ಠ ಏಳು ದಿನಗಳವರೆಗೆ ಗಾಯಾಳುಗಳು ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗಿನ ವೆಚ್ಚಗಳಿಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *