Breaking
21 Jun 2026, Sun

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೇ 9ರಂದು ರಾಜ್ಯ ಪಾಲರನ್ನು ಭೇಟಿಯಾಗಲಿದ್ದಾರೆ ಕರಾವಳಿ ಶಾಸಕರು

ಕಾರ್ಕಳ: ಕೆಲವು ದಿನಗಳ ಹಿಂದೆ ಮಂಗಳೂರಿನ ಬಜ್ಪೆ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ಕರಾವಳಿಯ ಶಾಸಕರು ಮೇ. 9 ರಂದು ರಾಜ್ಯಪಾಲರ ಭೇಟಿ ಮಾಡಿ ಒತ್ತಾಯ ಮಾಡಲಿದ್ದಾರೆ.

ಈ ಪ್ರಕರಣಲ್ಲಿ 100ಕ್ಕೂ ಹೆಚ್ಚು ಜನರು ಭಾಗಿಯಾಗಿರುವ ಆರೋಪವನ್ನು ಶಾಸಕರು ಮಾಡಿದ್ದು ಎನ್ಐಎ ತನಿಖೆಗೆ ಮಾಡುವಂತೆ ರಾಜ್ಯಪಾಲರಿಗೆ ಒತ್ತಾಯಿಸಲಿದ್ದಾರೆ.
ಸುಹಾಸ್ ಕೊಲೆಗೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ಹರಿದಿದೆ. ಮಂಗಳೂರಿನ ಪೊಲೀಸ್ ಅಧಿಕಾರಿಗಳೂ ಕೂಡ ಇದರಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ.

ಹತ್ಯೆಗೆ ಸಹಕರಿಸಿದ ಮಹಿಳೆಯರನ್ನು ಇನ್ನೂ ಕೂಡ ಬಂಧಿಸಿಲ್ಲ.ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕವೇ ತನಿಖೆ ನಡೆಸಿದಲ್ಲಿ ಮಾತ್ರ ಸತ್ಯ ಬಹಿರಂಗವಾಗಲು ಸಾಧ್ಯ. ಆದರೆ ರಾಜ್ಯ ಸರಕಾರ ಈ ನಿರ್ಣಯ ತೆಗೆದುಕೊಳ್ಳುವ ನಿರೀಕ್ಷೆ ಇಲ್ಲ.

ಹಾಗಾಗಿ ಈ ಪ್ರಕರಣದಲ್ಲಿ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಅವರು ಮಧ್ಯ ಪ್ರವೇಶಿಸಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಗೆ ವಹಿಸುವಂತೆ ಉಭಯ ಜಿಲ್ಲೆಯ ಶಾಸಕರು ಆಗ್ರಹಿಸಲಿದ್ದೇವೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *