ಉಜಿರೆ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ್ದು 100 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ.

ಈ ನಿಟ್ಟಿನಲ್ಲಿ ಸೇನೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಭಾರತದ ಹಲವು ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ. ಅಂತೆಯೇ ನಮ್ಮ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಉಜಿರೆಯ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಭಾರತೀಯ ಸೇನೆಯ ಧೈರ್ಯ ವರ್ಧನೆಗೆಗಾಗಿ ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಮುಂಡಾಜೆ, ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳುಪಸ್ಥಿತರಿದ್ದರು.


