Breaking
21 Jun 2026, Sun

ಮೇ 10ರಂದು ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ, ವನಿತಾ ಸಮಾಜ ಇದರ ವಾರ್ಷಿಕೋತ್ಸವ

ಬಂಟ್ವಾಳ : ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಇದರ 44 ನೇ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ 34ನೇ ವಾರ್ಷಿಕೋತ್ಸವವು ಮೇ 10 ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ.

ಬೆಂಗಳೂರು ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉದ್ಯಮಿ ಕಿರಣ್‌ಚಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸಮ್ಮಾನಿಸಲಾಗುವುದು. ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪಟ್ಲ ಪೌಂಡೇಶನ್ ಘಟಕ ವಿದ್ಯಾರ್ಥಿಗಳಿಂದ ಯಕ್ಷಗಾನ ನೃತ್ಯ ವೈಭವ, ಸಂಘದಲ್ಲಿ ನಡೆಯುತ್ತಿರುವ ವಿವಿಧ ತರಗತಿಗಳ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಹಾಗೂ ಸಂಘದ ಸದಸ್ಯರಿಂದ ಅರ್ಥ ಮಲ್ತೊನ್ಲೆ ತುಳು ನಾಟಕ ಪ್ರದರ್ಶನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುರ್ಡುಮೆ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *