ವಿಟ್ಲ: ಗೇಟ್ ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ವಿಟ್ಲದ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.

ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ನೋಡಿದ ಪದ್ಮನಾಭ ತಾನು ಧರಿಸಿದ್ದ ಚಡ್ಡಿಯನ್ನು ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


