ನವದೆಹಲಿ: ಪಹಲ್ಗಾಮ್ ನಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಪ್ರವಾಸಿ ಹಿಂದೂ ಪುರುಷರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಕ್ ಪ್ರೇರಿತ ಉಗ್ರರಿಗೆ ಭಾರತ ಆಪರೇಷನ್ ಸಿಂಧೂರ್ ಹೆಸರಲ್ಲಿ ಸರಿಯಾಗಿ ಪಾಠ ಕಲಿಸಿದೆ. ಮುಂದುವರಿದು ಪಾಕ್ – ಭಾರತ ಮಧ್ಯೆ ನಿರಂತರ ವಾಯುದಾಳಿ ನಡೆದಿದ್ದು ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು(ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆದಿದ್ದು
ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾ ಪಡೆಯ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಮತ್ತೆ ಮೇ 12ರಂದು ಮಾತುಕತೆಗೆ ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕದನ ವಿರಾಮದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ. ರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದಿದ್ದಾರೆ.
ಭಾರತೀಯ ಮಹಿಳೆಯ ಸಿಂಧೂರ ಕಿತ್ತು ಕೊಂಡಿದ್ದಕ್ಕೆ ಪ್ರತೀಕಾರವಾಗಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಮೂಲಕವೇ ಪಾಕ್ ವಿರುದ್ಧ ಪ್ರಥಮವಾಗಿ ಸಮರ ಸಾರಿತು. ಈ ಮೂಲಕ ಇಡೀ ಜಗತ್ತಿಗೆ ಮಹಿಳೆಯರ ನೇತೃತ್ವದಲ್ಲಿಯೇ ಪ್ರತೀಕಾರ ತೀರಿಸಿತು. ಅಷ್ಟೇ ಅಲ್ಲದೆ ಇಡೀ ಜಗತ್ತಿಗೆ ಈ ಮಹಿಳಾ ನಾಯಕರಿಂದಲೇ ಪತ್ರಿಕಾ ಗೋಷ್ಠಿ ಮಾಡಿಸಿ ದೇಶದ ನಾರಿ ಶಕ್ತಿ ಸಾಮರ್ಥ್ಯವನ್ನು ಸಾರಿ ಹೇಳಿತು.
ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಯಾವುದೇ ನಾಗರಿಕರ ಪ್ರಾಣಕ್ಕೆ ಹಾನಿಯಾಗದಂತೆ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿ, 9 ಉಗ್ರ ತಾಣಗಳನ್ನು ನಾಶ ಪಡಿಸಿದೆ.

