Breaking
24 Jun 2026, Wed

ಕಾಮಿಡಿ ಕಿಲಾಡಿಗಳು ಸೀಸನ್ 3 ವಿನ್ನರ್,  ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ!

ಉಡುಪಿ: .ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಉಡುಪಿ ನಿವಾಸಿಯಾಗಿರುವ ಇವರು  ನಿನ್ನೆ (ಮೇ.11)ನಿಟ್ಟೆ ಸಮೀಪದಲ್ಲಿ ಗೆಳೆಯನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಇಂದು ಮುಂಜಾನೆ ಸುಮಾರು 2 ಗಂಟೆಗೆ ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡಿದ್ದರು.  ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದರು. ಹಲವು ಕಾರ್ಯಕ್ರಮದಲ್ಲಿ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದರು.

ಪ್ರತಿಭಾನ್ವಿಯ ಹಾಸ್ಯ ನಟನ ಸಾವಿಗೆ ರಾಜ್ಯಾದ್ಯಂತ ಶೋಕ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *