ಉಡುಪಿ : ಸೋಮವಾರ ಕೊನೆಯುಸಿರೆಳೆದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಹೂಡೆ ನಿಧನಕ್ಕೆ ಕನ್ನಡ ಚಿತ್ರರಂಗ ಶಾಕ್ ಆಗಿದ್ದು, ತೀವ್ರ ಸಂತಾಪ ಸೂಚಿಸಿದೆ.
ಮಾತ್ರವಲ್ಲ ಇತ್ತ ಬಂಧು-ಬಳಗ ಸ್ನೇಹಿತರಿಗೆ ರಾಕೇಶ್ ಸಾವನ್ನಪಿದ್ದಾನೆ ಅನ್ನುವ ವಿಚಾರವನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಈಗಾಗಲೇ ಹಲವಾರು ನಾಟಕ, ರಿಯಾಲಿಟಿ ಶೋ, ಸಿನಿಮಾದಲ್ಲೂ ನಟಿಸಿರುವ ರಾಕೇಶ್ ಕೊನೆಯದಾಗಿ ಕಾಂತಾರ ಪಾರ್ಟ್ -1 ನಲ್ಲೂ ನಟಿಸಿದ್ದಾರೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು ಕಾಂತಾರ ಚಾಪ್ಟರ್ – 1ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ತುಂಬಲಾರದ ನಷ್ಟ.ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ.

‘ಕಾಂತಾರ’ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ನಟ ರಾಕೇಶ್ ಪೂಜಾರಿ ನಿಧನಕ್ಕೆ ಕಾಂತಾರ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ರಾಕೇಶ್ ಅಗಲಿಕೆಗೆ ಸಂತಾಪ ಸೂಚಿಸಿದೆ.

ಮೇ 12ರಂದು ರಾಕೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ವೇಳೆ, ಅನುಶ್ರೀ, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್, ಕಾಮಿಡಿ ಕಿಲಾಡಿಗಳು ತಂಡದ ಕಲಾವಿದರು ಭಾಗಿಯಾಗಿ ಅಂತಿಮ ದರ್ಶನ ಪಡೆದರು.
ನಿನ್ನೆಸಂಜೆ ಉಡುಪಿ ಹೂಡೆಯ ರುದ್ರಭೂಮಿಯಲ್ಲಿ ಬಿಲ್ಲವ ಸಂಪ್ರದಾಯದಂತೆ ನಟ ರಾಕೇಶ್ ಅಂತ್ಯಕ್ರಿಯೆ ನಡೆದಿದೆ.

