ಅಮೃತಸರ : ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಪೂರ್ಣಂ ಸಾಹು ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 10.30ಕ್ಕೆ ಪಾಕಿಸ್ತಾನದ ರೇಂಜರ್ಗಳು ಸಾಹು ಅವರನ್ನು ಬಿಎಸ್ಎಫ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಹಸ್ತಾಂತರವನ್ನು ಶಾಂತಿಯುತವಾಗಿ, ಶಿಷ್ಟಾಚಾರಗಳಿಗೆ ಅನುಸಾರವಾಗಿ ನಡೆಸಲಾಯಿತು ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.
ಏ.23 ರಂದು ಯೋಧ ಸಾಹು ಅವರು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ್ದರು.
ಈ ಸಂದರ್ಭ ಫಿರೋಜ್ಪುರ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಸಾಹು ಅವರನ್ನು ರೇಂಜರ್ಗಳು ಬಂಧಿಸಿದ್ದರು.


