ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 14ರಂದು ಬಾಳ್ತಿಲದಲ್ಲಿ ನಡೆದಿದೆ.
ಪದ್ಮನಾಭ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪುತ್ತೂರಿನ ಬಾರೊಂದರ ಫುಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೃತ ಪದ್ಮನಾಭ ಅವರು ಮೇ 14ರಂದು ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದರು. ಅವರ ಪತ್ನಿ ಚಿತ್ರಾ ಅವರು ಸೂರಿಕುಮೇರಿನಲ್ಲಿರುವ ತರವಾಡು ಮನೆಗೆ ಹೋಗಿದ್ದ ಸಂದರ್ಭ ಅಡುಗೆ ಕೋಣೆಯಲ್ಲಿ ಕಬ್ಬಿಣದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

12 ವರ್ಷಗಳ ಹಿಂದೆ ವಿವಾಹವಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲಇದೇ ಕಾರಣಕ್ಕೋ ಅಥವಾ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



