ಮುಸ್ಲಿಂ ಸಮುದಾಯಕ್ಕೆ ಅವಹೇಳನ ಆರೋಪ: ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮೇಲೆ ಬೆಳ್ತಂಗಡಿಯಲ್ಲಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರಿನ ಬಜ್ಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ನುಡಿನಮನ ಕಾರ್ಯಕ್ರಮ ಮೇ.12 ರಂದು ಗುರುವಾಯನಕೆರೆಯಲ್ಲಿ ನಡೆದಿತ್ತು.

ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ರೀತಿಯಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿತ್ತು.

ಈ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವರ್ತಾಯ ಮೇ.14 ರಂದು ದೂರು ನೀಡಿದ್ದಾರೆ.

ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ದೂರಿನ ಸಾರಾಂಶ:
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಶೆಟ್ಟಿಯವರು ಸಾಯಿರಾಮ್ ಫ್ರೆಂಡ್ಸ್ ಸಂಘಟನೆ ವತಿಯಿಂದ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಗುರುವಾಯನಕೆರೆಯಲ್ಲಿ ಮುಸ್ಲಿಂರವರ ಸಂಖ್ಯೆ ಜಾಸ್ತಿ , ಮುಸ್ಲಿಂರವರಲ್ಲಿ ವ್ಯಾಪಾರ, ವ್ಯವಹಾರ ಮಾಡಬಾರದು ,
ಮುಸ್ಲಿಂರವರಲ್ಲಿ ವ್ಯಾಪಾರ ,ವ್ಯವಹಾರ ಮಾಡುವುದನ್ನು ನಿಲ್ಲಿಸಬೇಕು, ಬಹಿಷ್ಕರಿಸಬೇಕು, ಗುರುವಾಯನಕೆರೆಯಲ್ಲಿ ಬೆಳಗ್ಗೆ ಬೇಗ ಮುಸ್ಲಿಂ ರಿಕ್ಷಾ ಚಾಲಕರು ಬರುವುದು. ನಮ್ಮಲ್ಲಿ ಚಂದವಾಗಿ ಮಾತಾನಾಡಿ ನಮಗೆ ಗೊತ್ತಿಲ್ಲದೆ ಮೋಸ ಮಾಡುತ್ತಾರೆ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಧರ್ಮ- ಧರ್ಮಗಳ ಮಧ್ಯೆ ಕೋಮು ಸಂಘರ್ಷ ಸೃಷ್ಟಿಸುವ ಉದ್ದೇಶದಿಂದ ಮುಸ್ಲಿಂ ಸಮುದಾಯವನ್ನು, ಅವಹೇಳನಕಾರಿಯಾಗಿ ಬಿಂಬಿಸಿ ಮಾತಾನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

Leave a Reply

Your email address will not be published. Required fields are marked *