ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೇ 14ರ ಬುಧವಾರ ಪಾಣೆಮಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಮಂಚಿ, ಕುಕ್ಕಾಜೆ ನಿವಾಸಿ ಲಿಖಿತ್ (22) ಎಂದು ಗುರುತಿಸಲಾಗಿದೆ.

ಸಂಜೆ 5.30 ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಸಂಚಾರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಲಿಖಿತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


