Breaking
19 Sep 2026, Sat

ಸರ್ವೇ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ನಗರದ ಬಿಜೈನಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬ ವಾಸವಾಗಿದೆ.

ಅದರಂತೆ ಗುರುವಾರ 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *