Breaking
22 Sep 2026, Tue

ಆನಂದ ಗುರೂಜಿಗೆ ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವ ಬೆದರಿಕೆ

ಬೆಂಗಳೂರು: ಪ್ರಖ್ಯಾತ ಜ್ಯೋತಿಷಿ ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸ್ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ ವಸಂತ (ಎ2) ಎಂಬವರ ವಿರುದ್ಧ ಆನಂದ್ ಗುರೂಜಿಯವರು ದೂರು ದಾಖಲಿಸಿದ್ದಾರೆ.

ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದಾರೆ.

ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಕೃಷ್ಣಮೂರ್ತಿ ಎ1 ಆರೋಪಿಯಾಗಿದ್ದರೆ, ದಿವ್ಯಾ ವಸಂತ ಎ2 ಆರೋಪಿಯಾಗಿದ್ದಾರೆ ಅನ್ನುವ ಮಾಹಿತಿಗಳು ಲಭ್ಯವಾಗಿದೆ.

ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *