Breaking
22 Mar 2026, Sun

ಕೋಟ: ಕಂದಕಕ್ಕೆ ಉರುಳಿದ ಟಿಟಿ ವಾಹನ : ಹಲವರಿಗೆ ಗಾಯ

ಉಡುಪಿ: ಪ್ರವಾಸ ಹೊರಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಕೇರಳದಿಂದ ಪ್ರವಾಸ ಹೊರಟಿದ್ದ ಸುಮಾರು ಹತ್ತು ಜನ ಪ್ರಯಾಣಿಕರಿದ್ದ ಟಿಟಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ.

ಅಪಘಾತದಲ್ಲಿ 10 ಕ್ಕೂ ಅಧಿಕ ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *