Breaking
22 Sep 2026, Tue

ಎರಡು ಲಾರಿಗಳ ಮಧ್ಯೆ ಅಪಘಾತ: ಓರ್ವ ಚಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ: ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಮೇ 15 ರಂದು ಸಜೀಪದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಸಜೀಪ ನಡು ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ಸಜೀಪನಡು ಗೋಳಿಪಡ್ಪುನಿವಾಸಿ ರಫೀಕ್(45) ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ಲಾರಿಯಲ್ಲಿ ತುಂಬಿದ್ದ ಬಿಸಿ ಡಾಂಬರು ರಫೀಕ್ ರವರ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಲಾರಿಯ ಕ್ಲೀನರ್ ಯೂಸುಫ್ ಎಂಬವರ ಕೈ ಕಾಲುಗಳ ಮೇಲೂ ಬಿಸಿ ಡಾಂಬರು ಬಿದ್ದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನೊಂದು ಲಾರಿಯ ಚಾಲಕ ರಿಝ್ವಾನ್ ಹಾಗೂ ಅಲ್ಪಾಸ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *