Breaking
24 Jun 2026, Wed

ಭರತ್ ಕುಮ್ಡೇಲ್ ವಿರುದ್ಧ ಕೋಮು ದ್ವೇಷ ಭಾಷಣ ಆರೋಪ – ದೂರು ದಾಖಲು

ಪುತ್ತೂರು : ಭಜರಂಗದಳ ಮುಖಂಡನಾಗಿರುವ ಭರತ್ ಕುಮ್ಡೇಲ್ ಕೋಮು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ.

ಗುರುವಾರದಂದು ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್ ಕುಮ್ಡೇಲ್ ಅವರು ಕೋಮು ದ್ವೇಷ ಭಾಷಣ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿದೆ.

ಇವರ ಮಾತುಗಳು ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಗಳಿರುವುದರಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *