Breaking
23 Mar 2026, Mon

ಪಿಕಪ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ, ವಾಹನ ಸಹಿತ ಚಾಲಕ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರದ ದಿಮ್ಮಿಯನ್ನು ಪಿಕಪ್ ವಾಹನವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ವಾಹನ ಸಹಿತ ಓರ್ವ ಆರೋಪಿಯನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ವಶಕ್ಕೆ ಪಡೆದ ಘಟನೆ ಮಂಗಳೂರು ನಗರದ ಜಪ್ಪಿನ ಮೊಗರು ಗ್ರಾಮದ ವೇಲೆನ್ಸಿಯಾ ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾಹನ ಚಾಲಕ ಕಾವೂರು ಕೃಷ್ಣ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ ಸುಮಾರು 5 ಲಕ್ಷ ರೂ. ಮೌಲ್ಯದ ವಾಹನ ಮತ್ತು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ, ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ, ವಿನಯ ಕುಮಾರ್, ವಾಹನ ಚಾಲಕ ಜಯಪ್ರಕಾಶ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *