Breaking
24 Jun 2026, Wed

ಪಾಣೆ ಮಂಗಳೂರಿನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ

ಬಂಟ್ವಾಳ : ಮಂಗಳೂರಿನ ಬಜಪೆಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೊಲೆ ಯತ್ನವನ್ನು ಮಾಡಲಾಗಿದೆ.

ಬಂಟ್ವಾಳದ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಪಾಣೆಮಂಗಳೂರು ಸಮೀಪದ ಅಕ್ಕರಂಗಡಿಯ ನಿವಾಸಿಯಾಗಿರುವ  ಹಮೀದ್  ಅವರನ್ನು ಬೈಕ್ ನಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು  ಚಾಕುವಿನಿಂದ ಇರಿದು  ಕೊಲೆಗೆ ಯತ್ನಿಸಿದ್ದಾರೆ.

ಸದ್ಯ ಅವರನ್ನು  ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ  ಘಟಕದಲ್ಲಿ ದಾಖಲಿಸಿ  ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಇನ್ನು ಗಾಯಾಳು ಹಮೀದ್ ಅವರು ವೃತ್ತಿಯಲ್ಲಿ ಪೇಂಟರ್ ಆಗಿದ್ದರು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *