Breaking
6 May 2026, Wed

ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಕಾಮಗಾರಿ: 6 ತಿಂಗಳು ಬೆಂಗಳೂರು-ಮಂಗಳೂರಿನ ಕೆಲ ರೈಲುಗಳು ರದ್ದು

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ನಡೆಯಲಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿಯಿಂದಾಗಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 6 ತಿಂಗಳ ಕಾಲ ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಮಂಗಳೂರು – ಬೆಂಗಳೂರು ಮಾರ್ಗದಲ್ಲಿ ರದ್ದಾಗುವ ರೈಲುಗಳು ಈ ಕೆಳಗಿನಂತಿವೆ:

*ಮೇ 31 ರಿಂದ ನವೆಂಬರ್ 1 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದು.

*ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ರದ್ದು.

*ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದು.

*ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ರದ್ದು.

*ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ರದ್ದು.

*ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದು.

Leave a Reply

Your email address will not be published. Required fields are marked *