Breaking
22 Mar 2026, Sun

ನಿದ್ದೆ ಮಾತ್ರೆ ಸೇವಿಸಿ ತಾಯಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಗನೂ ಸಾವು

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಮಟ್ಟದ ಕಲಾವಿದ ಕಲಾ ಶಿಕ್ಷಕ ಮುಂಡಾಜೆಯ ಜಯರಾಮ್ ಕೆ. ಅವರು ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ.ಕುಂಞ್ಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ(96) ಮತ್ತು ಅವರ ಮಗ ಜಯರಾಮ್ ಕೆ.(58) ಅವರು ಮೇ.10 ರಂದು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಈ ವೇಳೆ ತಾಯಿ ಕಲ್ಯಾಣಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದರು. ಜಯರಾಮ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂದಿಸದೆ ಇದ್ದದ್ದರಿಂದ ಮನೆಗೆ ಆಂಬುಲೆನ್ಸ್ ಮೂಲಕ ಕರೆತರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಅನ್ನುವ ಮಾಹಿತಿ ಇದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *