Breaking
22 Mar 2026, Sun

ಬಂದಾರು: ಆರತಕ್ಷತೆ ಭೋಜನ ಸೇವಿಸಿ ಓರ್ವ ಮಹಿಳೆ ಸಾವು!

ಬೆಳ್ತಂಗಡಿ : ಆರತಕ್ಷತೆಯಲ್ಲಿ ಭೋಜನ ಸೇವಿಸಿ 5 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂದಾರು ಗ್ರಾಮದಲ್ಲಿ ನಡೆದಿದ್ದು ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ.16ರಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೇ.12 ರಂದು ಆರತಕ್ಷತೆಯಲ್ಲಿ ಊಟದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ವಾಂತಿ, ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಈ ಹಿನ್ನಲೆ 5 ಮಂದಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಘಟನೆಯ ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಬಂದಾರಿನ ಸುಮಾರು 40 ಹೆಚ್ಚು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಈ ಘಟನೆಗೆ ನಿಖರ ಕಾರಣ ಏನೆಂಬುದು ಇನ್ನೂ ಕೂಡ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *