Breaking
6 May 2026, Wed

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ನಲ್ಲಿ ಸಾವು-ಹಲವು ಅನುಮಾನ

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಯುವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ಮೇ 17 ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿಯಾಗಿರುವ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಬೋಳಿಯಾರ್ ನಿವಾಸಿಗಳಾದ ಸುರೇಂದ್ರ ಹಾಗೂ ಸಿಂದೂದೇವಿ ದಂಪತಿ ಮಗಳಾದ ಆಕಾಂಕ್ಷ ಪಂಜಾಬ್ ನ ಫಗ್ವಾಡಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪೂರೈಸಿ 6 ತಿಂಗಳ ಹಿಂದೆ ದೆಹಲಿಯಲ್ಲಿ ಏರೋಸ್ಪೇಸ್ ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಜಪಾನಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಆಕಾಂಕ್ಷ ಶೈಕ್ಷಣಿಕ ಪ್ರಮಾಣ ಪತ್ರ ಪಡೆಯಲು ಪಂಜಾಬ್ಗೆ ತೆರಳಿದ್ದರು. ಶೈಕ್ಷಣಿಕ ಪ್ರಮಾಣ ಪತ್ರ ಪಡೆದ ನಂತರ ಆಕಾಂಕ್ಷ ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದು, ನಂತರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪಂಜಾಬ್ ನ ಜಲಂದರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *