Breaking
20 Jun 2026, Sat

ಮಲ್ಪೆಯ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕರಿಗೆ-ಪ್ರವಾಸಿಗರಿಗೆ ನಿರ್ಬಂಧ

ಉಡುಪಿ: ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ಮಲ್ಪೆಯ ಸೈಂಟ್ ಮೇರಿಸ್ ದ್ವೀಪಕ್ಕೆ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಭೇಟಿಯನ್ನು ಮುಂದಿನ 4 ತಿಂಗಳ ಕಾಲ ನಿರ್ಬಂಧಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಇದರ ಜತೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯ ತನಕ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂಬ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸಪ್ಟೆಂಬರ್ 15 ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ.

ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಪ್ರಕಾರ ಸ್ಥಗಿತಗೊಳಿಸಲಾಗಿದೆ. ನಿಯಮಗಳ ಪ್ರಕಾರ ಮೇ 16 ರಿಂದ 4 ತಿಂಗಳು ನಿಷೇಧವಿರಲಿದೆ. ಆದರೆ ಸಮುದ್ರತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1ರ ತನಕ ನೀರಿಗಿಳಿಯಬಹುದಾಗಿದೆ. ಬಳಿಕ ಬೀಚ್ ಉದ್ದಕ್ಕೂ ತಡೆ ಬೇಲಿ ಹಾಕಲಾಗುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *