Breaking
29 Jun 2025, Sun

ಬಲ್ಮಠದಲ್ಲಿ ಕಾಲೇಜ್ ಬಸ್ ಗೆ ಖಾಸಗಿ ಬಸ್ ಡಿಕ್ಕಿ, ಹಲವು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ರಸ್ತೆ ಬದಿ ನಿಂತಿದ್ದ ಖಾಸಗಿ ನರ್ಸಿಂಗ್ ಕಾಲೇಜ್ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆ ಮಂಗಳೂರು ನಗರದ ಬಲ್ಮಠ ಎಂಬಲ್ಲಿ ನಡೆದಿದೆ.

ಈ ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಖಾಸಗಿ ಬಸ್ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ನಗರದ ಬಲ್ಮಠ ಎಂಬಲ್ಲಿ ರಸ್ತೆ ಬದಿ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ನ್ನು ನಿಲ್ಲಿಸಲಾಗಿತ್ತು.

ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *