Breaking
21 Mar 2026, Sat

ಗುಂಡ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ,ನಾಲ್ವರಿಗೆ ಗಾಯ

ಗುಂಡ್ಯ: ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವೊಂದರಲ್ಲಿ ನಡೆದಿದೆ.

ಬಸ್ಸು ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ಕಾಶಿಬೆಟ್ಟು ನಿವಾಸಿ ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಎಂಬವರು ಗಾಯಗೊಂಡವರಾಗಿದ್ದಾರೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಳಿಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದಿಂದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Leave a Reply

Your email address will not be published. Required fields are marked *