ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಇದನ್ನು ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ “ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ?” ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದರು.
ಈ ಸಂಭಂದ ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಸಂಘಟನೆ ಗಳು, ಕಾರ್ಯಕರ್ತರು ಆರೋಪಿಸಿದ್ದಾರೆ.





