ಮಂಗಳೂರು: ಭಾರತ ಸೇನೆಯ ಆಪರೇಶನ್ ಸಿಂಧೂರ ಕಾರ್ಯಾಚರಣೆಯನ್ನು ಅಣಕಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದ ಮಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಬೆಳ್ತಂಗಡಿಯ ಬೆಳಾಲಿನ ರೇಷ್ಮಾ ಬಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆಕೆಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪ್ರಚೋದನಕಾರಿ ಮತ್ತು ಸೇನೆಯನ್ನು ಅಪಮಾನಿಸುವ ರೀತಿ ಪೋಸ್ಟ್ ಮಾಡಿದ್ದಕ್ಕೆ ಸ್ಪಷ್ಟನೆ ಕೇಳಿದ್ದು, ಕಾನೂನಿನ ಬಿಸಿ ಮುಟ್ಟಿಸಿದ್ದಾರೆ.
ಈಕೆ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ.. ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದ್ದು ಕತ್ತಲು…. ಎಲ್ಲೆಲ್ಲೂ ಕತ್ತಲು.. ದಿಕ್ಕಾರ ಆಪರೇಶನ್ ಸಿಂದೂರ ಎಂದು ಪೋಸ್ಟ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಮಾತ್ರವಲ್ಲ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೂಡ ವ್ಯಕ್ತವಾಗಿತ್ತು.ರೇಷ್ಮಾ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸದ್ರಿ ಪ್ರಕರಣದ ಮುಂದಿನ ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ.


