Breaking
19 Sep 2026, Sat

ಬಂಟ್ವಾಳ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್‌ ಸವಾರ ಸಾವು

ಬಂಟ್ವಾಳ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟೀಯ ಹೆದ್ದಾರಿ 66 ನೇತ್ರಾವತಿ ಸೇತುವೆ ಬಳಿ ಇಂದು ರಾತ್ರಿ ನಡೆದಿದೆ.

ಬೈಕ್ ಸವಾರನು ಹೆದ್ದಾರಿ ಪಕ್ಕದಲ್ಲಿರುವ ಹೋಟೆಲ್ ಒಂದರಲ್ಲಿ ಊಟ ಮುಗಿಸಿ ಹಿಂತಿರುಗುವಾಗ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್‌ ಡಿಕ್ಕಿಯಾಗಿದೆ.

ಮೃತನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *