Breaking
22 Mar 2026, Sun

ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ನಿಧನ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಬ್ರಾಯ್ ರಾಮ ನಾಯಕ್ (ಎಸ್.ಆರ್ ನಾಯಕ್ 80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಇವರು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನ್ಯಾಯ, ಕಾನೂನು ಮತ್ತು ಮಾನವ ಹಕ್ಕುಗಳಿಗೆ ಅಪಾರ ಕೊಡುಗೆ ನೀಡಿರುವ ಇವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *