Breaking
6 May 2026, Wed

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸುವ ಹಿನ್ನಲೆ ಮೇ 18ರಿಂದ 22ರವರೆಗೆ ರಾಜ್ಯದಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಐಎಂಡಿ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ವಾಯುಭಾರ ಕುಸಿತದ ಸಾಧ್ಯತೆಯಿಂದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ನೀಡಲಾಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಳಗಾವಿ, ಧಾರವಾಡ, ಹಾವೇರಿ ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೇ 19 ರಿಂದ 22ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಮೇ 19 ಹಾಗೂ 20ರಂದು ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *