Breaking
22 Mar 2026, Sun

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಎರಡು ಬೈಕ್ ಗೆ ಡಿಕ್ಕಿ: ಇಬ್ಬರು ದುರ್ಮರಣ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಮೇ.19ರಂದು ಬೆಂಗಳೂರು- ಕನಕಪುರ ರಸ್ತೆಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತಪಟ್ಟಿದಾರೆ ಎಂದು ತಿಳಿದುಬಂದಿದೆ.

ಬಸ್ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಬಳಿಕ ಪಕ್ಕದ ರಸ್ತೆಗೆ ನುಗ್ಗಿದ ಬಸ್ ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗ‌ರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *