ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರತ ಕುಸಿತವಾದ ಹಿನ್ನಲೆ ರಾಜ್ಯಾದಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮೇ 20 ರಿಂದ 23ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ನೀಡಿದೆ.
ನಿನ್ನೆ ತಡರಾತ್ರಿಯಿಂದಲೇ ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರ ಮಳೆಯಾಗುತ್ತಿದೆ.



