ಧರ್ಮಸ್ಥಳ: ಗ್ರಾಮದ ಬೊಳಿಯರ್ ನಿವಾಸಿ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ಪೊಲೀಸ್ ವಿಚಾರಣೆ ನಡೆಸುತ್ತಿದ್ದಾರೆ.
ಮೇ.19 ರಂದು ಮಧ್ಯಾಹ್ನ ಆಕಾಂಕ್ಷ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ರಾತ್ರಿ ವೇಳೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಮೃತದೇಹವನ್ನು ಮನೆಯವರಿಗೆ ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದೆ.

ಬಳಿಕ ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದ್ದು ಆ ಬಳಿಕ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ.



