ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬಯಿ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.
ಈತ ವಿದೇಶದಲ್ಲಿಯುವಕರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 1,65,000 ರೂಪಾಯಿ ಹಣವನ್ನು ಪಡೆದಿದ್ದ ಎಂಬ ಆರೋಪ ಕೇಳಿ ಬಂದಿದೆ.

ಈವರೆಗೆ ಆರೋಪಿ ಮಸೀವುಲ್ಲಾ ಅತಿವುಲ್ಲಾ ಖಾನ್ ಸುಮಾರು 1 ಕೋಟಿ 82 ಲಕ್ಷ ರೂಪಾಯಿವರೆಗೆ ಹಣವನ್ನು ಪಡೆದು ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಯ ಇನ್ನಷ್ಟು ಅಪರಾಧಗಳ ಕುರಿತಾದ ಮಾಹಿತಿಯನ್ನು ಸಿಸಿಬಿ ಪೊಲೀಸರು ಕಲೆ ಹಾಕುತ್ತಿದ್ದಾರೆ.


