ಮಂಗಳೂರು: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವವು ಮಂಗಳೂರಿನಲ್ಲಿ ಇಂದು ನಡೆಯಿತು.
ನಗರದ ಪಿವಿಎಸ್ ವೃತ್ತದಿಂದ ಲಾಲ್ಬಾಗ್ ಪಾಲಿಕೆ ಕೇಂದ್ರ ಕಚೇರಿವರೆಗೆ ನಡೆದ ಈ ಜಾಥಾದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.ಈ ಸಂದರ್ಭ ಪಾಕಿಸ್ತಾನದ ವಿರುದ್ಧ ನಡೆಸಿದ ‘ಅಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಶೌರ್ಯ ಮೆರೆದ ಯೋಧರ ಸಾಹಸವನ್ನು ಕೊಂಡಾಡಲಾಯಿತು.




ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಸುಧೀರ್ ಎಂ. ಪೈ, ‘ದೇಶದ ಹೊರಗಿನ ಶತ್ರುಗಳಿಗಿಂತ ದೇಶದೊಗಳಗಿನ ಶತ್ರುಗಳ ಬಗ್ಗೆ ಎಚ್ಚರ ವಹಿಸಬೇಕಿದೆ ಆಪರೇಷನ್ ಕಾರ್ಯಾಚರಣೆ ಸಂದರ್ಭದಲ್ಲಿ ದೇಶವೇ ಒಟ್ಟಾಗಿ ಸೇನೆಯ ಬೆಂಬಲಕ್ಕೆ ನಿಂತಿದೆ’ ಎಂದರು.
ಬಳಿಕ ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್ ಅವರು ಭಾರತದಲ್ಲಿ ತಯಾರಾಗಿ ಪಾಕಿಸ್ತಾನದ ನೆಲದಲ್ಲಿ ಪರೀಕ್ಷಿಸಲಾದ ಕ್ಷಿಪಣಿಗಳು ನಮ್ಮ ಸೇನೆಯ ಬಳಿ ಇವೆ. ನಾವು ಯೋಚಿಸಬೇಕಾದುದು ನಮ್ಮ ಸೈನಿಕರು ಏನು ಮಾಡುತ್ತಿದ್ದಾರೆ ಎಂಬ ಬಗ್ಗೆ ಅಲ್ಲ.ಆದರೆ ದೇಶದ ಒಳಗೆ ಹಾಗೂ ಆಸುಪಾಸಿನಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಜಾಗರೂಕರಾಗಬೇಕಿದೆ. ನೆರೆ ಹೊರೆಯಲ್ಲಿ ಎಷ್ಟು ರೊಹಿಂಗ್ಯಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳು ನೆಲೆಸಿದ್ದಾರೆ. ನಮ್ಮ ಮಕ್ಕಳು ಯಾವ ವಿಚಾರಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಯೋಚಿಸಬೇಕಿದೆ ಎಂದರು
ಈ ಸಂದರ್ಭ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗಳು, ವಜ್ರದೇಹಿ ಶ್ರೀ ಗಳು,ಕಲ್ಲಡ್ಕ ಪ್ರಭಾಕರ್ ಭಟ್, ಗಣೇಶ್ ಕಾರ್ಣಿಕ್, ಪ್ರದೀಪ್ ಕಲ್ಕೂರ್ ಸೇರಿದಂತೆ , ಬಿ.ಜೆ.ಪಿ. ಪಕ್ಷದ ಶಾಸಕರು, ಸಂಸದರು,ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಸಿಂಧೂರ ವಿಜಯೋತ್ಸವ ಜಾಥಾದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.



