ಬೆಂಗಳೂರು: ಬ್ಯಾಂಕ್ ಸಿಬ್ಬಂದಿಯೊಬ್ಬರು ಗ್ರಾಹಕನಿಗೆ ನಾನು ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿಸಿದ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರಿನ ಸರ್ಜಾಪುರದ ಎಸ್ಬಿಐ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದ್ದು ಕನ್ನಡ ಪರ ಸಂಘಟನೆಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕೆಲಸದ ನಿಮಿತ್ತ ಗ್ರಾಹಕರೊಬ್ಬರು ಬ್ಯಾಂಕ್ ಹೋದಾಗ ಕನ್ನಡ ಮಾತನಾಡುವಂತೆ ಕೇಳಿದ್ದಾರೆ.
ಆದರೆ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದಾರೆ. ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ.
ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ ಎಂದು ಹೇಳಿಕೆ ಕೊಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.



