Breaking
23 Mar 2026, Mon

ಜೂನ್‌1ರಿಂದ ಜುಲೈ 31ರವರೆಗೆ ದ.ಕ. ಜಿಲ್ಲೆಯ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ

ಮಂಗಳೂರು: ದ.ಕ. ಜಿಲ್ಲೆಯ ಕರಾವಳಿ ತೀರದಲ್ಲಿ ಜೂನ್‌1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆ ಹೊರಡಿಸಿದ್ದಾರೆ.

ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಯನ್ನು ನಿಷೇಧಿಸಲಾಗಿದ್ದು, ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ ಎಂದಿದ್ದಾರೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿಸಿದೆ.

Leave a Reply

Your email address will not be published. Required fields are marked *