Breaking
23 Mar 2026, Mon

ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಆಲ್ಟೊ ಕಾರು : ಎಸ್ಕೇಪ್‌ ರಭಸಕ್ಕೆ ಆಕ್ಟಿವಾ, ಪಿಕಪ್ ಗೆ ಡಿಕ್ಕಿ!

ಬಿ.ಸಿ ರೋಡ್:‌ ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಆಲ್ಟೋ ಕಾರು ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಪಾಲ್ತಾಜೆಯಲ್ಲಿ ಮೇ 20ರಂದು ನಡೆದಿದೆ.

ಡ್ರೈವಿಂಗ್‌ ವೇಳೆ ಮಧ್ಯಪಾನ ಮಾಡಿ ಬಿ.ಸಿ.ರೋಡಿನ ಪೆಟ್ರೋಲ್‌ ಬಂಕ್‌ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಪರಾರಿಯಾಗಿದ್ದಾರೆ. ಈ ವೇಳೆ ದಾರಿ ಮಧ್ಯೆ ಆಲ್ಟೊ ಕಾರು ನಿಯಂತ್ರಣ ತಪ್ಪಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ 112 ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *