Breaking
20 Sep 2026, Sun

ಮುಂದಿನ 24 ಗಂಟೆಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ದಿಢೀರ್ ಪ್ರವಾಹ ಸಾಧ್ಯತೆ: ಹವಾಮಾನ ಇಲಾಖೆಯಿಂದ ಅಲರ್ಟ್!

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಇಂದು ಬೆಳಗ್ಗಿನಿಂದಲೇ ನಿರಂತರ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಎಲ್ಲಾ 7 ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹವಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *