Breaking
9 May 2026, Sat

ಮಹೇಂದ್ರ TUV, ಲಾರಿ, VRL ಬಸ್ ಮಧ್ಯೆ ಸರಣಿ ಅಪಘಾತ; ಸ್ಥಳದಲ್ಲೇ ಉಸಿರು ಚೆಲ್ಲಿದ 6 ಮಂದಿ

ವಿಜಯಪುರ: ಮಹೇಂದ್ರ ಟಿಯುವಿ 300 ಕಾರು, ಲಾರಿ, ಖಾಸಗಿ ಬಸ್ (VRL) ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ ಘಟನೆ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್.ಎಚ್.– 50) ಮೇ. 21ರಂದು ಬೆಳಗ್ಗೆ ಸಂಭವಿಸಿದೆ.

ಸೋಲಾಪುರದತ್ತ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ಗೆ ಢಿಕ್ಕಿ ಹೊಡೆದು ಪಕ್ಕದ ರಸ್ತೆ ಹಾರಿ ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಬಳಿಕ ಇದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಸ್ಕಾರ್ಪಿಯೋ ವಾಹನದಲ್ಲಿದ್ದ ತೆಲಂಗಾಣ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಪುತ್ರಿ ಜೋಸ್ನ್ಯಾ, ಪುತ್ರ ಅಭಿರಾಮ, ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ಖಾಸಗಿ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ್ ಎಂದು ಗುರುತಿಸಲಾಗಿದೆ.

ಭಾಸ್ಕರನ್ ಅವರ ಇನ್ನೋರ್ವ ಪುತ್ರ ಪ್ರವೀಣ್ ತೇಜ(10) ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *