Breaking
21 Mar 2026, Sat

ಗೃಹ ಸಚಿವ ಡಾ. ಜಿ ಪರಮೇಶ್ವರ ಗೆ ಇ.ಡಿ ಶಾಕ್ – ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ ಇ.ಡಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

ತುಮಕೂರಿನ ಹೆಗ್ಗೆರೆ ಬಳಿಯಿರುವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಎಸ್ಎಸ್ಐ ಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ.

ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ ಪಿ ತಾಕೀತು ಮಾಡಿದ್ದಾರೆ. ಅಲ್ಲದೆ, ಡಿವೈಎಸ್ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ಒದಗಿಸಲಾಗಿದೆ.

ಈ ಮೂಲಕ ಐಟಿ ನಂತರ ಇದೀಗ ಇಡಿ ಕೂಡ ಪರಮೇಶ್ವರ್ ಅವರಿಗೆ ಶಾಕ್ ನೀಡಿದೆ.

Leave a Reply

Your email address will not be published. Required fields are marked *