ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಹಲವು ಸಮಸ್ಯೆಗಳು ಉಂಟಾಗಿದೆ.
ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ನಿಟ್ಟಿನಲ್ಲಿ ಪ್ರವಾಸಿಗರನ್ನು ಸಮುದ್ರದಲ್ಲಿ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇವತ್ತು ಮತ್ತು ಮುಂದಿನ ಕೆಲ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇತ್ತ ಮಲ್ಪೆಯ ಕಡಲಿನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರರು ಕಡಲಿಗೆ ಇಳಿದಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.

