Breaking
22 Mar 2026, Sun

ಕಲ್ಲರ್ಪೆಯಲ್ಲಿ ಕಾರು, ಬೈಕ್ ಅಪಘಾತ – ಸವಾರ ಗಂಭೀರ

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ.

ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Leave a Reply

Your email address will not be published. Required fields are marked *