Breaking
22 Mar 2026, Sun

ಮೇ.25ರಂದು ಪುತ್ತೂರು ಬಿಲ್ಲವ ಸಂಘದ ಯುವವಾಹಿನಿಯಿಂದ ‘ಡೆನ್ನಾನ ಡೆನ್ನನ’ ಜಾನಪದ ಸ್ಪರ್ಧೆ

ಪುತ್ತೂರು: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ಸಾಂಸ್ಕೃತಿಕವಾಗಿ ಮತ್ತು ಕ್ರಿಯಾಶೀಲ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆಯು ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದೆ ಎಂದು ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಹೇಳಿದರು.

ಪುತ್ತೂರಿನ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶಗಳೊಂದಿಗೆ ರಾಜ್ಯಾದ್ಯಂತ ಯುವವಾಹಿನಿಯ 35 ಘಟಕಗಳು ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 4600 ಮಂದಿ ಸದಸ್ಯರಿರುವ ಯುವವಾಹಿನಿಯ ಸೇವಾ ಕಾರ್ಯಗಳಿಗೆ ಕರ್ನಾಟಕ ರಾಜ್ಯ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಸದಾ ಸೇವೆ ಮಾಡುವ ಯುವ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮವಾಗಿ ಡೆನ್ನಾನ ಡೆನ್ನನ ಜಾನಪದ ಶೈಲಿಯ ಅಂತರ್ ಘಟಕದ ಸ್ಪರ್ಧೆಯನ್ನು ಏರ್ಪಪಡಿಸಲಾಗಿದೆ. ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯಡಿಯಲ್ಲಿ ಬರುವ 35 ಘಟಕಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಒಂದು ಘಟಕಗಳಿಗೆ ಒಂದು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಪ್ರತಿ ತಂಡಗಳಿಗೆ 20 ನಿಮಿಷಗಳ ಕಾಲವಕಾಶವಿದೆ. ಕಾರ್ಯಕ್ರಮದಲ್ಲಿ ವೈವಿದ್ಯಮಯ ಉಪಹಾರ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿದೆ.

ಬೆಳಿಗ್ಗೆ 9.30ರಿಂದ ಪ್ರಾರಂಭವಾಗಲಿರುವ ಕಾರ್ಯಕ್ರಮಗಳಿಗೆ ಗೆಜ್ಜೆಗಿರಿ ನಂದನ ಬಿತ್ತಿಲ್‌ನ ಯಜಮಾನ ಶ್ರೀಧರ ಪೂಜಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸಭಾ ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಅಣ್ಣಿ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಶಾಸಕ ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ವಾಲಿಬಾಲ್ ಎಸೋಸಿಯೇಶನ್ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್, ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಿಜಯ ಹಾರ್ವಿನ್, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಿಜಯ ಕುಮಾರ್ ಸೊರಕೆ, ಸ್ನೇಹ ಸಿಲ್ಕ್ & ರೆಡಿಮೆಡ್‌ನ ಮ್ಹಾಲಕ ಸರೀಶ್ ಬಿ., ನಿವೃತ್ತ ಎಎಸ್‌ಐ ಪುಷ್ಪಲತಾ, ಯುವವಾಹಿನಿ ಕೇಂದ್ರ ಸಮಿತಿ ಸಾಂಸ್ಕೃತಿಕ ನಿರ್ದೇಶಕ ಸುಶಾಂತ್ ಕರ್ಕೇರ, ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಅಮೈ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್, ಮಂಗಳೂರಿನ ಉದ್ಯಮಿ ಅಭಿಷೇಕ್ ಸುವರ್ಣ ಅಜಿಲಮೊಗರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *