Breaking
22 Mar 2026, Sun

ಬೆಂಗಳೂರಿನಲ್ಲಿ ಸೂಟ್ ಕೇಸ್ ನಲ್ಲಿ ಬಾಲಕಿಯ ಶವ ಪತ್ತೆ

ಬೆಂಗಳೂರು: ಸೂಟ್ ಕೇಸ್ ವೊಂದರಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾದ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದಿದ್ದು, ಪ್ರಕರಣ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.

ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್ಕೇಸ್ ಪತ್ತೆಯಾಗಿದೆ.

ಚಲಿಸುವ ರೈಲಿನಿಂದ ಸೂಟ್ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ಈ ಬಗ್ಗೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *