Breaking
19 Sep 2026, Sat

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ -ದೂರು ದಾಖಲು

ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ.

ಮಡೆನೂರು ವಿರುದ್ಧ ಸಹ ಕಲಾವಿದೆಯೇ ಅತ್ಯಾಚಾರದ ದೂರನ್ನು ದಾಖಲು ಮಾಡಿದ್ದಾರೆ.

ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯ ಮಾಡಿದ್ದು ನಾಳೆಯೇ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಈ ಮಧ್ಯೆ ನಟನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇನ್ನು ಅತ್ಯಾಚಾರ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *